ಇಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಬಳಿಯಿರುವ ಪೆಟ್ರೋಲ್ ಬಂಕ್ ಎದುರುಗಡೆ ದಿನನಿತ್ಯ ನಿರಂತರವಾಗಿ ಏರುತ್ತಿರುವ “ಪೆಟ್ರೋಲ್ ಬೆಲೆ ಏರಿಕೆ”ಯನ್ನು ಖಂಡಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.
ಈ ಒಂದು ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಡಿಜಿ ಶಾಂತನಗೌಡರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಬಿ ಮಂಜಪ್ಪನವರು, ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗದ್ದಿಗೇಶಣ್ಣನವರು ಬಿ ಸಿದ್ದಪ್ಪನವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.