ಪ್ರಧಾನಿ ಮೋದಿ ಮತ್ತು ಯಡ್ಯೂರಪ್ಪರ ಪಾತ್ರಧಾರಿಗೆ ಚಾಟಿ ಏಟು ನೀಡುವ ಮೂಲಕ, ಡಿ.ಕೆ.ಶಿ. ಅಭಿಮಾನಿಗಳು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಇಂದು ಶಿವಮೊಗ್ಗದ ಪಿಳ್ಳಂಗೆರಿ ಗ್ರಾಮದ ಪೆಟ್ರೋಲ್ ಬಂಕ್ ಮುಂಭಾಗ ಡಿ.ಕೆ.ಶಿ. ಅಭಿಮಾನಿಗಳ ಬಳಗದ ಸದಸ್ಯರು ಪ್ರತಿಭಟನೆ ನಡೆಸಿ, ತೈಲ ಬೆಲೆ ಏರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲು ಹೂವಿನ ಹಾರ ಹಾಕಿ ಸನ್ಮಾನಿಸಿದ ಬಳಿಕ, ಒಂದು ಬಾಟಲ್ ಪೆಟ್ರೋಲ್ ನೀಡಿ, ಚಾಟಿ ಏಟು ನೀಡಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನೇ ದಿನೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು, ಕೂಡಲೇ ಕೇಂದ್ರ ಸರ್ಕಾರ ಇದನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿ.ಎಂ. ಯಡ್ಯೂರಪ್ಪ ವಿರುದ್ಧ ಘೋಷಣೆ ಕೂಗಿ, ಕಾಂಗ್ರೆಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ, ರಾಜ್ಯದೆಲ್ಲೆಡೆ ತೈಲ ಬೆಲೆ ಏರಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಆಗ್ರಹಿಸಿದ್ದಾರೆ.