ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವವಿರುವುದರಿಂದ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಜೂನ್ 16 ರಿಂದ ಆಗಸ್ಟ್ 30 ರವರೆಗೆ ಅಥವಾ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧಿಸಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗದಲ್ಲಿ ಕೆಳಕಂಡಂತೆ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಕ್ರ.ಸಂ ವಾಹನ ಸಂಚಾರಕ್ಕಾಗಿ ಹಾಲಿ ಬಳಕೆ ಮಾಡುತ್ತಿರುವ ರಸ್ತೆಯ ವಿವರ ವಾಹನಗಳು ಸಂಚರಿಸುವ ಪರ್ಯಾಯ ಮಾರ್ಗಗಳ ವಿವರ
1 ರಾಣೆಬೆನ್ನೂರು ಮಾರ್ಗದಿಂದ-ಶಿಕಾರಿಪುರ-ಹೊಸನಗರ-ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳು ಹೊಸನಗರ-ನಗರ-ಮಾಸ್ತಿಕಟ್ಟೆ-ಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವುದು.