ಭಾರತ ಸಂವಿಧಾನ ಅನುಚ್ಚೇದ 275(1) ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ವರ್ಗದವರ ಅಭಿವೃದ್ದಿ ಕಾರ್ಯಕ್ರಮದಡಿ ಪಾಲಿಮನೆ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಸಹಾಯಕ ನಿರ್ದೇಶಕರು(ಗ್ರೇಡ್-1)ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಜುಲೈ 7 ರ ಒಳಗಿಗಾಗಿ ಸಲ್ಲಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08282-263761 ನ್ನು ಸಂಪರ್ಕಿಸಬಹುದೆಂದು ಭದ್ರಾವತಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.