ನ್ಯಾಯಪೀಠ ಆದೇಶ ನೀಡಿ ತಮಿಳುನಾಡು ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಮಾಡಿದೆ.
ಬಿ ಎಮ್ ಪಾಟೀಲ ಜಿಲ್ಲಾಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟ
ಬಾಗಲಕೋಟೆ: ಮೇಕೆದಾಟು ಆನೆಕಟ್ಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆಯಾಗಿರುವುದನ್ನು ಹಾಗೂ ಕನ್ನಡ ನಾಡು,ನುಡಿ,ನೆಲ, ಜಲ, ಸಂಸ್ಕೃತಿ ಹಾಗೂ ಪರಂಪರೆಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರ ನಾಡಿನ ಹಿತ ದೃಷ್ಟಿಕೋನ ಇಟ್ಟುಕೊಂಡು ಬಂದಿರುವುದನ್ನು ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾಘಟಕವು ಆತ್ಮೀಯವಾಗಿ ಸ್ವಾಗತಿಸುತ್ತದೆ.ಇತ್ತೀಚಿನ ದಿನಗಳಲ್ಲಿ ತಮಿಳುನಾಡಿನ ತಮಿಳು ಪತ್ರಿಕೆಗಳು ಮೇಕೆದಾಟು ಯೋಜನೆಯಲ್ಲಿ ಅರಣ್ಯ ಇಲಾಖೆಯ ಯಾವುದೇ ಅನುಮತಿ ಪಡೆಯದೆ ಆನೇಕಟ್ಟು ನಿರ್ಮಾಣಕ್ಕೆ ಮುಂದಾಗಿವೆ ಎಂದು ಸುಳ್ಳುಸುದ್ಧಿ ಬಿತ್ತರಿಸಿದ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ರಾಷ್ಟ್ರೀಯ ಹಸಿರು ಪೀಠ 2021 ರ ಮೇ ತಿಂಗಳಿನಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿತ್ತು. ನ್ಯಾಯಮೂರ್ತಿ ಕೆ ರಾಮಕೃಷ್ಣನ್ ಮತ್ತು ತಜ್ಞ ಸದಸ್ಯ ಕೆ ಸತ್ಯಗೋಪಾಲ್ ಅವರನ್ನೊಳಗೊಂಡ ಎನ್‌ಜಿಟಿ (ರಾಷ್ಟ್ರೀಯ ಹಸಿರು ಪೀಠ) ಸದರ್ನ್ ಬೆಂಚ್ ಅಗತ್ಯ ಅರಣ್ಯ ಅನುಮತಿ ಪಡೆಯದೆ ಕರ್ನಾಟಕ ಸರ್ಕಾರವು ಮೆಕೆಡಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ತಯಾರಿ ಆರಂಭಿಸಿದೆ ಎಂಬ ಮಾಧ್ಯಮ ವರದಿಯೊಂದನ್ನು ಆಧರಿಸಿ ಸುಮೋಟೋ ಅರ್ಜಿ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು. ಮೇಕೆದಾಟು ಆನೆಕಟ್ಟು ನಿರ್ಮಾಣ ವಿವಾದ ಸರ್ವೋಚ್ಚ ನ್ಯಾಯಾಲಯದ ಮುಂದೆ ಬಾಕಿ ಇರುವ ಕಾರಣ ಮತ್ತು ಅರಣ್ಯ ಇಲಾಖೆಯ ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ಬಾಕಿ ಇರುವುದರಿಂದ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಸಮ್ಮತಿಸಿ,ನಂತರ ಸಂಪೂರ್ಣ ವಿಚಾರಣೆಯ ನಂತರ ನ್ಯಾಯಪೀಠವು ಕರ್ನಾಟಕ ಸರ್ಕಾರವು ಯಾವುದೇ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಂಡು ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇತ್ತೀಚಿಗೆ ರಾಜ್ಯದ ವಾದವನ್ನು ಮನ್ನಿಸಿ, ರಾಷ್ಟ್ರೀಯ ಹಸಿರು ಪೀಠ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸುವ ಮೂಲಕ ಸದರಿ ಪ್ರಕರಣವನ್ನು ಮುಂದೆ ವರಿಸಲು ಬಯಸುವುದಿಲ್ಲ ಎಂದು ನ್ಯಾಯಪೀಠ ಆದೇಶ ನೀಡಿ ತಮಿಳುನಾಡು ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಮಾಡಿದೆ.
ಬಿ ಎಮ್ ಪಾಟೀಲ ಜಿಲ್ಲಾಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟ