ಕೋವಿಡ್ 19 ಎರಡನೇ ಅಲೆಯ ಹಿನ್ನೆಲೆ ಘೋಷಿಸಿರುವ ಲಾಕ್‍ಡೌನ್‍ನ ಪರಿಣಾಮದಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಾರ್ಮಿಕರನ್ನು ರಾಜ್ಯ ಸರ್ಕಾರ ಗಮನಿಸಿ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ರೂ.2000 ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಘೋಷಿಸಿದೆ.
11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್‍ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ನೆರವಿನ ಪ್ಯಾಕೇಜ್ ಘೋಷಿಸಲಾಗಿದ್ದು ಈ ವರ್ಗಗಳ 18 ರಿಂದ 65 ವಯೋಮಾನದ ಒಳಗಿನ, ಬಿಪಿಎಲ್ ಕುಟುಂಬದ ಓರ್ವ ಫಲಾನುಭವಿಯು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹನಾಗಿರುತ್ತಾರೆ.
ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕಾಗಿದ್ದು ನಿಗದಿತ ವೃತ್ತಿ ನಿರ್ವಹಿಸುತ್ತಿರುವ ಕುರಿತು ಈ ಕೆಳಕಂಡ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ https://sevasindhu.karnataka.gov.in ಪೋರ್ಟಲ್‍ನಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು.
ದೃಢೀಕರಣ ಪ್ರಮಾಣ ಪತ್ರ ನೀಡುವ ಅಧಿಕಾರಿಗಳು : ಬಿ.ಬಿ.ಎಂಪಿ ವ್ಯಾಪ್ತಿಯ ವಾರ್ಡ್‍ಗಳ ಮಟ್ಟದಲ್ಲಿನ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು/ಹಿರಿಯ ಆರೋಗ್ಯ ಅಧಿಕಾರಿಗಳು/ಆರೋಗ್ಯ ನಿರೀಕ್ಷಕರು. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು. ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು/ ಉಪ ತಹಶೀಲ್ದಾರರು/ಕಂದಾಯ ಅಧಿಕಾರಿಗಳು/ಕಂದಾಯ ನಿರೀಕ್ಷಕರು. ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು/ಕಾರ್ಮಿಕ ಅಧಿಕಾರಿಗಳು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್‍ರಾಜ್ ಅಭಿವೃದ್ದಿ ಅಧಿಕಾರಿ/ಕಾರ್ಯದರ್ಶಿ/. ಹಮಾಲಿ ವೃತ್ತಿಯಲ್ಲಿ ತೊಡಗಿಕೊಂಡ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ/ಮಂಡಳಿ/ನಿಗಮದ ಅಧಿಕೃತ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯುವುದು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳು(ಗೆಜೆಟೆಡ್ ಆಫೀಸರ್ಸ್).
ಅರ್ಜಿದಾರರು ಅರ್ಜಿ ಸಲ್ಲಿಸಲು ಮಾರ್ಗದರ್ಶನ ಮತ್ತು ನೆರವಿಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇವಾ ಕೇಂದ್ರಗಳು/ವಾರ್ಡ್ ಮಟ್ಟದ ಸೇವಾ ಕೇಂದ್ರಗಳು/ಸಾಮಾನ್ಯ ಸೇವಾ ಕೇಂದ್ರಗಳು(ಸಿಎಸ್‍ಸಿ, ಕಾರ್ಮಿಕ ಸೇವಾ ಕೇಂದ್ರಗಳನ್ನು ಅಥವಾ ಕಾರ್ಮಿಕ ನಿರೀಕ್ಷಕರು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಚೇರಿಯನ್ನು ಭೇಟಿ ನೀಡಬಹುದು. ಹಾಗೂ ಕಾರ್ಮಿಕ ಸಹಾಯವಾಣಿ ಸಂಖ್ಯೆ: 155214 ಅಥವಾ ಸೇವಾಸಿಂಧು ಸಂಸ್ಥೆಯ ಸಂಖ್ಯೆ 8088304855/6361799796/9380204364/9380206704 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *