ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ
ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾದ ಶಶಿಕಲಾ ಅ. ಜೊಲ್ಲೆ
ಅವರು ಜೂ. 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 2-30
ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲೆಯಲ್ಲಿ
ಕೊರೊನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ
ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ
ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ಸಂಜೆ 4.30ಕ್ಕೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ
ನಡೆಸುವರು. ಸಚಿವರು ಅದೇ ದಿನ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ
ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.