ಜಿಲ್ಲಾ ಪ್ರವಾಸ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ
ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾದ
ಶಶಿಕಲಾ ಅ. ಜೊಲ್ಲೆ ಅವರು ಜೂ.22 ರಂದು ದಾವಣಗೆರೆ ಜಿಲ್ಲಾ
ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ
2.30 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸುವರು. ಬಳಿಕ
ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ 3 ನೇ ಅಲೆಯಿಂದ ಮಕ್ಕಳ
ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ
ಮುಂಜಾಗ್ರತಾ ಕ್ರಮಗಳ ಕುರಿತು ಜನಪ್ರತಿನಿಧಿಗಳು
ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ
ಸಭೆ ನಡೆಸುವರು.
ಸಂಜೆ 4.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಪತ್ರಿಕಾಗೋಷ್ಠಿ ನಡೆಸುವರು. ಸಚಿವರು ಅದೇ ದಿನ ಸಂಜೆ 5
ಗಂಟೆಗೆ ಹುಬ್ಬಳ್ಳಿಗೆ ತೆರಳುವರು ಎಂದು ಸಚಿವರ ವಿಶೇಷ
ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *