ಪ್ರವೇಶಕ್ಕೆ ಅರ್ಜಿ ಆಹ್ವಾನ
2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ
ವಸತಿ ಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ
ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ಸಮವಸ್ತ್ರ,
ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು
ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ
ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75
ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ
ವರ್ಗದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಪ್ರವೇಶ ಲಭ್ಯವಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ
ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು.
ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಜೂ.21 ರಿಂದ
ಜು.10 ರೊಳಗಾಗಿ ಅಲ್ಪಸಂಖ್ಯಾತರ ಮೌಲಾನಾ ಆeóÁದ್ ಆಂಗ್ಲ
ಮಾಧ್ಯಮ ಮಾದರಿ ಶಾಲೆಗಳ ಕಚೇರಿ ವೇಳೆಯಲ್ಲಿ
ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಂಡಜ್ಜಿ,
ಹರಿಹರ ತಾ|| ದಾವಣಗೆರೆ ಜಿಲ್ಲೆ, (ಮೊ:9008815296), ಅಲ್ಪಸಂಖ್ಯಾತರ
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೆರೆಬಿಳಚಿ, ಚನ್ನಗಿರಿತಾ||
ದಾವಣಗೆರೆಜಿಲ್ಲೆ, (ಮೊ:9036866642), ಅಲ್ಪಸಂಖ್ಯಾತರ ಮೊರಾರ್ಜಿ
ದೇಸಾಯಿ ಬಾಲಕಿಯರ ವಸತಿ ಶಾಲೆ, ನಿಜಲಿಂಗಪ್ಪ ಬಡಾವಣೆ, ದಾವಣಗೆರೆ
ಟೌನ್ ದಾವಣಗೆರೆ. (ಮೊ:9916828601), ಅಲ್ಪಸಂಖ್ಯಾತರ ಮೊರಾರ್ಜಿ
ದೇಸಾಯಿ ವಸತಿ ಶಾಲೆ, ಹೊನ್ನಾಳಿತಾ|| ದಾವಣಗೆರೆ ಜಿಲ್ಲೆ,
(ಮೊ:9164855466), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,
ಜಗಳೂರು ತಾ|| ದಾವಣಗೆರೆ ಜಿಲ್ಲೆ (ಮೊ: 8296909570) ಇವರಿಗೆ
ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ
ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.