ಮಾನ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರ ಅಧ್ಯಕ್ಷತೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಸಮುದ್ರ ಕೊರೆತದ ಬಗ್ಗೆ, 2021 22 ನೇ ಸಾಲಿನ ಆಯವ್ಯಯದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ನೀಡಿರುವ ಅನುದಾನದ ಬಗ್ಗೆ ಹಾಗೂ ಬಂದರುಗಳ ಅಭಿವೃದ್ಧಿ ಬಗ್ಗೆ ಸಭೆ ನಡೆಯಿತು.
ಈ ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಕಪಿಲ್ ಮೋಹನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಶಾಸಕರುಗಳಾದ ಶ್ರೀ ಡಾ. ವೈ ಭರತ್ ಶೆಟ್ಟಿ, ಶ್ರೀ ಉಮಾನಾಥ್ ಕೋಟ್ಯಾನ್, U T ಖಾದರ ಶ್ರೀ ವೇದವ್ಯಾಸ ಕಾಮತ್, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕಾರವಾರ ನಿರ್ದೇಶಕರು ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.