ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ
ಎಂ.ಪಿ.ರೇಣುಕಾಚಾರ್ಯ ಅವರು ಜೂ.25 ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಎಂ.ಪಿ. ರೇಣುಕಾಚಾರ್ಯ ಅವರು ಜೂ. 25 ರಂದು ಬೆಳಿಗ್ಗೆ 10.30 ರಿಂದ
ಮಧ್ಯಾಹ್ನ 1-30 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ
ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗಳು ಮತ್ತು
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19
ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳನ್ನು
ವೀಕ್ಷಿಸುವರು ಹಾಗೂ ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು
ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ
ಮತ್ತು ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವರು.
ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು
ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.