ನ್ಯಾಮತಿ : ಮನುಷ್ಯನ ಜೀವನದಲ್ಲಿ ಲಸಿಕೆ ಒಂದು ಭಾಗವಾಗಿದ್ದು ಪ್ರತಿಯೊಬ್ಬರೂ ಲಸಿಕೆ ನೀಡ ಬೇಕೆಂದು ಸರ್ಕಾರ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಸಿಎಂ ರಾಜಕೀಯ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಹಾಗೂ ಅವರ ಕುಟುಂಬಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.
ಕೊರೊನಾ ಮೊದಲನೆ ಅಲೆ ಮನುಷ್ಯನ ಮೇಲೆ ದುಪ್ಪರಿಣಾಮ ಬೀರಲಿಲ್ಲಾ, ಆದರೇ ಎರಡನೇ ಅಲೆ ಸಾಕಷ್ಟು ಸಾವು ನೋವು ಉಂಟು ಮಾಡಿದ್ದು ಮನಸ್ಸಿಗೆ ನೋವುಂಟು ಮಾಡಿದೆ ಎಂದ ಶಾಸಕರು, ಮೂರಲೇ ಅಲೆ ಬರುತ್ತದೆಂದು ಹೇಳುತ್ತಿದ್ದು ಪ್ರತಿಯೊಬ್ಬರೂ ಲಸಿಕೆ ಪಡೆದು ಕೊರೊನಾವನ್ನು ಎದುರಿಸಿ ಎಂದು ಕರೆ ನೀಡಿದರು.
ಆರಂಭದಲ್ಲಿ ಲಸಿಕೆ ಬಂದಾಗ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಕೇಳಿದರೂ ಯಾರೂ ಲಸಿಕೆ ಹಾಕಿಸಿಕೊಳ್ಳುತ್ತಿರಲಿಲ್ಲಾ, ಆದರೇ ಇದೀಗ ಲಸಿಕೆಗಾಗೀ ಜನರು ದುಂಬಾಲು ಬೀಳುತ್ತಿದ್ದು,ಅವಳಿ ತಾಲೂಕಿನ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುವುದು ನನ್ನ ಜವಾಬ್ದಾರಿ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದರು.
ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದವರೇ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಸರ್ಕಾರಕ್ಕೆ ಲಸಿಕೆ ನೀಡಿ ಎಂದು ಹೇಳುತ್ತಿದ್ದಾರೆ, ಅವರ ಮಾತನ್ನು ನಂಬಿ ಲಸಿಕೆ ಹಾಕಿಸಿಕೊಳ್ಳದ ಸಾರ್ವಜನಿಕರು ಇದೀಗ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡ ಬೇಕೆಂದು ಸಂಕಲ್ಪ ಮಾಡದ್ದಾರೆ ಅಲ್ಲದೇ ಕೊವೀಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ಪರಿಹಾರ ಘೋಷಿಸುವ ಮೂಲಕ ದೇಶಕ್ಕೆ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ ಎಂದರು.
18 ವರ್ಷ ಮೇಲ್ಪಟ್ಟವರಿಗೆ ಸದ್ಯದರಲ್ಲದೇ ಲಸಿಕೆ ಬರಲಿದ್ದು ಎಲ್ಲರಿಗೂ ಲಸಿಕೆ ಸಿಗಲಿದೆ ಎಂದ ಶಾಸಕರು ಯಾರೂ ಕೂಡ ಲಸಿಕೆ ಬಗ್ಗೆ ಆತಂಕ ಪಡ ಬೇಡಿ ಎಂದು ಕಿವಿ ಮಾತು ಹೇಳಿದರು.
ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಹೋಳಿಗೆ ಊಟದವ್ಯವಸ್ಥೆ ; ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿದ್ದು, ಸರ್ಕಾರಿ ನೌಕರರು, ಶಿಕ್ಷಕರು ಸೇರಿದಂತೆ ಲಸಿಕೆ ಹಾಕಿಸಿಕೊಳ್ಳಲು ಬಂದ ಸಾರ್ವಜನಿಕರಿಗೆ ಶಾಸಕರು ಹೋಳಿಗೆ ಊಟದ ವ್ಯವಸ್ಥೆ ಮಾಡಿಸಲಾಗಿತ್ತು.
ಈ ಸಂದರ್ಭ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಪಿ.ರವಿಕುಮಾರ್ ಸೇರಿದಂತೆ ಸರ್ಕಾರ ನೌಕರರ ಸಂಘದದ ಸದಸ್ಯರು, ಶಿಕ್ಷಕರ ಸದಸ್ಯರು ಸೇರಿದಂತೆ ಮತ್ತಿತತರಿದ್ದರು