ದಾವಣಗೆರೆ: ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಭೇಟಿ ನೀಡಿ ಲಸಿಕೆ ಪಡೆದ ಕಾಂಗ್ರೆಸ್ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಜನರ ಬಳಿ ಹೋಗಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವಂತೆ ಸೂಚಿಸಿದರು.

ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಾದ ಮಹಿಳಾ ಘಟಕ, ಸೇವಾದಳ, ಕಿಸಾನ್ ಕಾಂಗ್ರೆಸ್, ಯವ ಕಾಂಗ್ರೆಸ್, ಎನ್ ಎಸ್ ಯುಐ, ಇಂಟೆಕ್ ಮತ್ತು ಸಾಮಾಜಿಕ ಜಾಲತಾಣ ಹಾಗೂ ದಾವಣಗೆರೆ ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಲಸಿಕೆ ನೀಡಲಾಯಿತು.

ತಮ್ಮ ಸ್ವಂತ ಹಣದಲ್ಲಿ ಉಚಿತವಾಗಿ ಲಸಿಕೆ ನೀಡಿದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಅನಿತಾಬಾಯಿ ಮಾಲತೇಶ್, ಡೋಲಿ ಚಂದ್ರು, ಸುರೇಶ್ ಜಾಧವ್, ಹರೀಶ್, ಮಹ್ಮದ್ ಬಾಷಾ, ಲಿಯಾಕತ್ ಅಲಿ, ಮೈನುದ್ದಿನ್, ಸದ್ದಾಂ, ಸತೀಶ್ ಶೆಟ್ಟಿ, ಶ್ರೀಮತಿ ಕವಿತಾ ಚಂದ್ರಶೇಖರ್ ಮತ್ತಿತರರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಮಹಿಳಾ ಕಾಂಗ್ರೆಸ್‍ನ ದ್ರಾಕ್ಷಾಯಣಮ್ಮ, ರುದ್ರಮ್ಮ, ಶುಭಮಂಗಳ, ರಾಜೇಶ್ವರಿ, ಆಶಾ ಮುರುಳಿ, ಉಮಾ ಕುಮಾರ್, ಗೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *