ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಎಐಸಿಸಿ ಮಾರ್ಗಸೂಚಿಯಂತೆ
ಹಮ್ಮಿಕೊಳ್ಳಲಾಗುತ್ತಿರುವ ಜನ ಸಂಪರ್ಕ ಅಭಿಯಾನ ಹಾಗೂ ಸರ್ಕಾರದ ವೈಫಲ್ಯ ವಿರುದ್ಧದ ಹೋರಾಟದ ರೂಪುರೇಷೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ ಮುಖ್ಯಸ್ಥರ ಜತೆ ಶನಿವಾರ ವಿಡಿಯೋ ಸಂವಾದ ಸಭೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಹೊತ್ತಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕೆಲ ಕಾಲ ಸಭೆಯಲ್ಲಿ ಭಾಗವಹಿಸಿದರು. ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧೃವನಾರಾಯಣ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಕಾಗೋಡು ತಿಮ್ಮಪ್ಪ, ಮಾಜಿ ಸಚಿವೆಯರಾದ ಮೋಟಮ್ಮ, ಉಮಾಶ್ರೀ, ಮಾಧ್ಯಮ ವಿಭಾಗ ಮುಖ್ಯಸ್ಥರಾದ ಬಿ.ಎಲ್ ಶಂಕರ್, ಮತ್ತಿತರ ಮುಖಂಡರು ಹಾಜರಿದ್ದರು.