ಕಳೆದ ತಿಂಗಳು ಆಕ್ಸಿಜನ್ ಕೊರತೆ ದುರಂತದಲ್ಲಿ ಮೃತಪಟ್ಟ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಚಿನ್ನಪ್ಪನಪುರದೊಡ್ಡಿಯ ಕೊರೋನಾ ಸೋಂಕಿತ ರಂಗಸ್ವಾಮಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಮೃತರ ಪತ್ನಿ ಪುಷ್ಪಾ ರಂಗಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ 1 ಲಕ್ಷ ರುಪಾಯಿ ಪರಿಹಾರದ ಚೆಕ್ ವಿತರಿಸಿದರು. ಕಾರ್ಯಾಧ್ಯಕ್ಷರಾದ ಧೃವನಾರಾಯಣ್, ಶಾಸಕ ನರೇಂದ್ರ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಬಾಲರಾಜ್ ಉಪಸ್ಥಿತರಿದ್ದರು.