ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದದ್ದು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿಗಳಾದ ಸುರೇಶ್ ರವರು ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ 2021 ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು ಕೊಳಚೆ ನೀರಿನಲ್ಲಿ ವಾಸ ಮಾಡುತ್ತಿದ್ದು ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಕೊಳಚೆ ಆಗದಂತೆ ಎಚ್ಚರ ವಹಿಸಿ ಮಲೇರಿಯಾ ರೋಗದಿಂದ ದೂರವಿರಲು ಕರೆ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಡಾ॥ ಜೋಶಿ GR ಸಹ ಪ್ರಾಧ್ಯಾಪಕರಾದ ಡಾ॥ಪಟ್ಟಣ್ ರಾಕೇಶ್ ರೆಡ್ ಕ್ರಾಸ್ ಸಂಚಾಲಕ ರಾದ ಡಾ।ಪಾಂಡುರಂಗ ಆರೋಗ್ಯ ನಿರೀಕ್ಷಣಾಧಿಕಾರಿ ಗಳಾದ ತಾಜ್ ಪೀರ್ ಖಾನ ಜ್ಯೋತಿ ಕಿರಣ್ BPMO ಶ್ರೀ ವೀರೇಶ್ ಹಾಜರಿದ್ದು ಕಾರ್ಯಕ್ರಮ ನಡೆಸಿಕೊಟ್ಟರು ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ ತಪಾಸಣೆ ಮತ್ತು ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು ಅದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.

Leave a Reply

Your email address will not be published. Required fields are marked *