ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು 2020 ರಲ್ಲಿ ಪ್ರಕಟವಾದ ಕನ್ನಡ
ಪುಸ್ತಕಗಳಿಗೆ ಕಸಾಪ ದಲ್ಲಿ ಸ್ಥಾಪಿತವಾಗಿರುವ ವಿವಿಧ 48 ದತ್ತಿನಿಧಿಯಡಿ
ನೀಡಲಾಗುವ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಕಳುಹಿಸಲು ಅರ್ಜಿ
ಆಹ್ವಾನಿಸಲಾಗಿದೆ.
ಎಲ್ಲ ಸ್ಪರ್ಧೆಗಳಿಗೂ ಈ ನಿಯಮಗಳು ಅನ್ವಯಿಸುತ್ತವೆ ಪ್ರತಿ
ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ,
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು-560018  ಕೊನೆಯ ದಿನಾಂಕ
ಜು.05 ರ ಒಳಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ
ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಪರಿಶೀಲನೆಗೆ ಬಂದ
ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ
ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು
ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಯಾವುದೇ
ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ
ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.
ಒಂದಕ್ಕಿಂತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು
ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು
ಪರಿಷತ್ತಿಗೆ ಇರುತ್ತದೆ. ಪಿ.ಹೆಚ್.ಡಿ ಗ್ರಂಥಗಳನ್ನು ಸ್ಪರ್ಧೆಗೆ
ಪರಿಗಣಿಸುವುದಿಲ್ಲ. ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು
ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸತಕ್ಕದು.
ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ
ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ
ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ
ಬರೆಯಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಅಂತರ್ಜಾಲ
ತಾಣ ತಿತಿತಿ.ಞಚಿsಚಿಠಿಚಿ.iಟಿ  ಮೂಲಕ  ಪಡೆಯಬಹುದು ಎಂದು ಗೌರವ
ಕಾರ್ಯದರ್ಶಿ ಕೆ.ರಾಜ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *