ಹೊನ್ನಾಳಿ : ಯುವ ಸಮೂಹ ನಮ್ಮ ದೇಶದ ಆಸ್ತಿ ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷವಾಗಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿಯನಿಯರಿಗೆ ಲಸಿಕಾಮೇಳ ಏರ್ಪಡಿಸಿದ್ದು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 600 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡದರು. ದೇಶದ ಅಭಿವೃಧ್ಧಿಯಲ್ಲಿ ಯುವಕರದ್ದು, ಸಿಂಹಪಾಲು ಇರುವುದರಿಂದ ಮೊದಲು ಅವರು ದೈಹಿಕವಾಗಿ ಸದೃಢತೆಯಿಂದ ಇರಬೇಕಾದರೆ ಮೊದಲು ಲಸಿಕೆ ಹಾಕಿಸಿಕೊಳ್ಳಬೇಕೆಂದ ರೇಣುಕಾಚಾರ್ಯ ಯಾರೂ ಸಹ ಲಸಿಕೆ ಹಾಕಿಸಿಕೊಳ್ಳದೆ ಉದಾಸೀನ ಮಾಡಬೇಡಿ ಎಂದರು.
ಅವಳಿ ತಾಲೂಕಿನಲ್ಲಿ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡ ಬೇಕೆಂಬ ಉದ್ದೇಶದಿಂದ ಲಸಿಕೋತ್ಸವ ಆರಂಭಿಸಿದ್ದು ಎಲ್ಲಾ ವಿದ್ಯಾರ್ಥಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಲಸಿಕೆ ಹಾಕಿಸಿಕೊಳ್ಳುವಂತೆ ಕಿವಿ ಮಾತು ಹೇಳಿದರು.