ಹೊನ್ನಾಳಿ : ಯುವ ಸಮೂಹ ನನ್ನ ದೇಶದ ಸಂಪತ್ತು, ಅಂತಹ ಯುವ ಸಮೂಹಕ್ಕೆ ಲಸಿಕೆ ನೀಡುತ್ತಿದ್ದು ಯುವ ಸಮೂಹ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಲಸಿಕೋತ್ಸವದಲ್ಲಿ ಪಾಲ್ಗೊಂಡು, ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.
ಲಸಿಕೆ ಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು ಯುವ ಸಮೂಹ ಲಸಿಕೆ ಬಗ್ಗೆ ಅಸಡ್ಡೆ ತೋರೆದೆ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿ ಹೇಳಿದರು.
ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ದಿನಗಳಿಂದ ಲಸಿಕೆ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವುದು ಮುಗಿದ ನಂತರ ನ್ಯಾಮತಿ,ಸಾಸ್ವೇಹಳ್ಳಿ ಕಾಲೇಜಿನ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಿದ್ದು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಬ್ಬರಿಗೂ ಲಸಿಕೆ ನೀಡಲಿದ್ದು ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದ ರೇಣುಕಾಚಾರ್ಯ ಲಸಿಕೆ ವಿಚಾರದಲ್ಲಿ ನಾನು ಎಂದೂ ರಾಜಕಾರಣ ಮಾಡುವುದಿಲ್ಲಾ, ಅದರ ಅವಶ್ಯಕತೆಯೂ ನನಗಿಲ್ಲಾ, ಹಂತ ಹಂತವಾಗಿ ಲಸಿಕೆ ಬರಲಿದ್ದು,ಅವಳಿ ತಾಲೂಕಿನ ಪ್ರತಿ ಹಳ್ಳಿಗೂ ಲಸಿಕೆ ನೀಡಲಾಗುವುದು ಎಂದರು.