ಬೆ ೦ ಗ ಳೂ ರು : ಕೆ ಪಿ ಸಿ ಸಿ ಹಿ೦ ದುಳಿ ದ ವ ಗ೯ ಗಳ ಘಟಕದ ಅಧ್ಯಕ್ಷ ರಾಗಿದ್ದ . ಎಂ.ಡಿ. – ಲಕ್ಷ್ಮೀನಾರಾಯಣ – ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮೂರು ವರ್ಷ ಎಂಟು ತಿಂಗಳಿಂದ ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷರಾಗಿ ಲಕ್ಷ್ಮೀ- ನಾರಾಯಣ ಕೆಲಸ ಮಾಡುತ್ತಿದ್ದಾರೆ. ರಾಜೀನಾಮೆ ಅಂಗೀಕರಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದರೂ ಅದನ್ನು ಅಂಗೀಕರಿಸಿಲ್ಲ’ ಎಂದರು.
ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯಿಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಎಸ್. ರವಿ ಹಾಗೂ ಡಿಸಿಸಿ ಅಧ್ಯಕ್ಷ ಮುನಿಶಾಮಣ್ಣ ಇದ್ದರು.