ದಾವಣಗೆರೆ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ಲಸಿಕೆ ನೀಡಬೇಕೆಂದು ಆಗ್ರಹಿಸಿ ಜುಲೈ 3 ರಂದು ದಾವಣಗೆರೆ ನಗರದ 9 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ 9 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ತಂದು ಲಸಿಕೆ ಸಮರ್ಪಕ ಪೂರೈಸಲು ಮನವಿ ಮಾಡಲಾಗುವುದು.
ಆದ ಕಾರಣ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು, ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳಾದ ಎನ್‍ಎಸ್‍ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಿಸಾನ್ ಕಾಂಗ್ರೆಸ್, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ., ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಧರಿಸಿ,ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ತಿಳಿಸಿದ್ದಾರೆ.