ಜುಲೈ 7ರಂದು ದಾವಣಗೆರೆಗೆ ಕೆ.ಹೆಚ್.ಮುನಿಯಪ್ಪ
ಕರೋನಾದಿಂದ ಮಡಿದ ಕುಟುಂಬಗಳಿಗೆ ಸಾಂತ್ವನ
ಪೆಟ್ರೋಲ್,ಡಿಸೇಲ್ ದರ ಹೆಚ್ಚಳ ಖಂಡಿಸಿ ಸೈಕಲ್ ಜಾಥಾ
ದಾವಣಗೆರೆ: ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪನವರು ಜುಲೈ 7 ರಂದು ದಾವಣಗೆರೆ ನಗರಕ್ಕೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಕರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳುವರು. ನಂತರ ಪೆಟ್ರೋಲ್,ಡಿಸೇಲ್ ದರ ಹೆಚ್ಚಳ ಖಂಡಿಸಿ ಬೆಳಿಗ್ಗೆ 11 ಗಂಟೆಗೆ ನಗರದೇವತೆ ಶ್ರೀದುರ್ಗಾಂಬಿಕಾ ದೇವಸ್ಥಾನದ ಆವರಣದಿಂದ ಜಿಲ್ಲಾ ಕಾಂಗ್ರೆಸ್ ಏರ್ಪಡಿಸಿರುವ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆವ ಈ ಸೈಕಲ್ ಜಾಥಾ ವೀರಮದಕರಿ ನಾಯಕ ವೃತ್ತ, ಪಿ.ಬಿ.ರಸ್ತೆ ಮೂಲಕ ಜಯದೇವ ವೃತ್ತಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ತಿಳಿಸಿದ್ದಾರೆ.
ಆದ ಕಾರಣ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು, ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳಾದ ಎನ್‍ಎಸ್‍ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಿಸಾನ್ ಕಾಂಗ್ರೆಸ್, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ. ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *