ಜಿಲ್ಲೆಯ 120 ಪರೀಕ್ಷಾ ಕೇಂದ್ರಗಳಲ್ಲಿ ಜು.19 ಮತ್ತು 21 ರಂದು
ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ
ನಡೆಸಲು ಹಾಗೂ ಪಾರದರ್ಶಕ ಸುಗಮ ಪರೀಕ್ಷೆ ಪ್ರಕ್ರಿಯೆಗಾಗಿ
ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಚನ್ನಗಿರಿ-23, ದಾವಣಗೆರೆ ಉತ್ತರ-18,
ದಾವಣಗೆರೆ ದಕ್ಷಿಣ-32, ಹರಿಹರ -17, ಹೊನ್ನಾಳಿ -16, ಜಗಳೂರು -14 ಪರೀಕ್ಷೆ
ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಯಾವುದೇ ಅವ್ಯವಹಾರ, ಅಚಾತುರ್ಯಕ್ಕೆ ಅವಕಾಶ ನೀಡದಂತೆ
ಕಲಂ 144 ಕಾಯ್ದೆಯಡಿ ಜಿಲ್ಲಾ ವ್ಯಾಪ್ತಿಯ ಎಲ್ಲ ಪರೀಕ್ಷಾ ಕೇಂದ್ರದ 200
ಮೀ ಸುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದರನ್ವಯ
ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ
ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್
ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವುದನ್ನು
ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ
ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ
ಅನ್ವಯಿಸುವುದಿಲ್ಲ. ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ
ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ
ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು
ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ
ನಿಷೇಧಿಸಲಾಗಿದೆ.
ವಾಣಿಜ್ಯ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ : ಜು.12 ರಿಂದ 26 ರವರೆಗೆ
ನಡೆಯಲಿರುವ ವಾಣಿಜ್ಯ ಪರೀಕ್ಷೆಗಳು ಪಾರದರ್ಶವಾಗಿ ಹಾಗೂ
ಸುವ್ಯವಸ್ಥಿತವಾಗಿ ನಡೆಯಲು ಹಾಗೂ ಅವ್ಯವಹಾರ ತಡೆಗಟ್ಟಲು
ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಸರ್ಕಾರಿ ಪ್ರೌಢಶಾಲೆ ಮೈದಾನ,
ಪಿ.ಜೆ.ಬಡಾವಣೆಯಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು
ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ
ಪ್ರವೇಶಕ್ಕೆ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ
ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ
ಅನ್ವಯಿಸುವುದಿಲ್ಲ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪರೀಕ್ಷಾ
ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು
ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್
ಕೆಫೆ, ಕಂಪ್ಯೂಟರ್ ಅಂಗಡಿಗಳನ್ನು ಮತ್ತು ಇತರೆ ಕ್ರಮಗಳನ್ನು
ತೆಗೆದುಕೊಳ್ಳಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದು
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.