ಬೆಂಗಳೂರು : ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವುದು, ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ, ಇನ್ವೆಸ್ಟ್ ಕರ್ನಾಟದ ಆಯೋಜನೆ, ರಾಜ್ಯದಲ್ಲಿ ಆಮ್ಲಜನಕದ ತಯಾರಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಯೋಜನೆಗಳಿಗೆ ಅನುಮತಿ ನೀಡಲಾಯಿತು.

ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್‌ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಸಂಪುಟ ಬಂದಿದೆ. ಆದರೆ ಸಹಕಾರ ಇಲಾಖೆಯಿಂದ ಪ್ರಸ್ತಾಪಿತವಾದ ಸಹಕಾರ ಸಂಘ ಹಾಗೂ ಬ್ಯಾಂಕ್‌ ಚುನಾವಣೆಗೆ ಗ್ರೀನ್‌ಸಿಗ್ನಲ್ ನೀಡಲಾಗಿದೆ. ಅಲ್ಲಿನ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯಲು ಮೊದಲ ಹಂತದಲ್ಲಿ 15ಕೋಟಿ ರು., ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ ನಡೆಸಲು 48 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಭೆಯಲ್ಲಿ ಅನುಮೋದನೆ ದೊರಕಿದೆ. ಇನ್ವೆಸ್ಟ್ ಕರ್ನಾಟಕ-2022ನ್ನು ಫೆಬ್ರವರಿ 9, 10 ಮತ್ತು 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಸಭೆ ತೀರ್ಮಾನಿಸಿದೆ. ಹಾಗೆಯೇ ರಾಜ್ಯದಲ್ಲಿ ಆಮ್ಲಜನಕ ತಯಾರಿಕೆಯನ್ನು ಹೆಚ್ಚಿಸಲು ಮತ್ತು ಅದನ್ನು ಸಂಗ್ರಹಿಸಲು ಇನ್ಸೆಂಟಿವ್ ಸ್ಕೀಮ್​ಗೆ ಸಭೆ ಒಪ್ಪಿಗೆ ನೀಡಿದೆ.

Leave a Reply

Your email address will not be published. Required fields are marked *