ಉಲ್ಲಂಘನೆಗೆ ದಂಡ
ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದು
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಬಳಿ ಇರುವ
ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ
ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ,
ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು
ಗುಣಮಟ್ಟ ಪ್ರಾಧಿಕಾರ, ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ
ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳವು ಸಿಗರೇಟು ಮತ್ತು
ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 17,
ಸೆಕ್ಷನ್ 6ಎ ಅಡಿಯಲ್ಲಿ 04, ಸೇರಿದಂತೆ ನಿಯಮ ಉಲ್ಲಂಘನೆಯ ಒಟ್ಟು 21
ಪ್ರಕರಣಗಳನ್ನು ದಾಖಲಿಸಿ, ರೂ.2,150/- ಗಳ ದಂಡ ಸಂಗ್ರಹಿಸಿದೆ.
ತಂಡವು ಹೊನ್ನಾಳಿ ಮತ್ತು ನ್ಯಾಮತಿ ಪಟ್ಟಣದಲ್ಲಿ ಹೊಟೇಲ್, ಬಾರ್,
ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು
ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ
ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ
ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ
ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ
ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು
ತಾಕೀತು ಮಾಡಿದರು.
ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ
ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ
ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು
ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100
ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ
ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ
ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ
ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ
ಸದಸ್ಯರು ಮಾಹಿತಿ ನೀಡಿದರು.
ದಾಳಿಯಲ್ಲಿ ಡಾ.ಆರ್.ಎಂ.ಮೆಣಸಿಕಾಯಿ, ಹಿರಿಯ ವೈದ್ಯಾಧಿಕಾರಿ ಮಹಾಂತಸ್ವಾಮಿ,
ಸಿ.ಡಿ.ಪಿ.ಓ ರಮೇಶ್, ನ್ಯಾಮತಿಯ ಉಪ ನಿರೀಕ್ಷಕರಾದ ಪಿ.ಎಸ್ ಪೊಲೀಸ್, ಜಿಲ್ಲಾ
ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ವಿ ಹೊರಕೇರಿ, ಹಿರಿಯ ಆರೋಗ್ಯ
ನಿರೀಕ್ಷಣಾಧಿಕಾರಿ ಲೋಕೇಶ್.ಆರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ
ಸಮಾಜ ಕಾರ್ಯಕರ್ತ ಕೆ.ಪಿ.ದೇವರಾಜ್, ಬಿ.ಹೆಚ್.ಈ.ಓ ಎನ್.ಹೆಚ್ ಗೀತಾ, ಶಿಕ್ಷಣ
ಇಲಾಖೆಯ ಈ.ಸಿ.ಓ ಮುದ್ದನಗೌಡ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ
ನವೀನ್, ಪೊಲೀಸ್ ಠಾಣೆಯ ಪೇದೆ ಜಗದೀಶ್.ಜಿ.ವಿ, ಮತ್ತು ಕೃಷ್ಣ ಹಾಗೂ
ಸಹಾಯಕರು ಸೇರಿದಂತೆ ಇತರಿದ್ದರು.