ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉದ್ಯೋಗಾದಾರಿತ ಡಿಪ್ಲೊಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ
2021-22 ನೇ ಸಾಲಿನ ಶೈಕ್ಷಣಿಕ ಪ್ರವೇಶಕ್ಕೆ ಆನ್‍ಲೈನ್ ಅಥವಾ ಆಫ್‍ಲೈನ್
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್
ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್), ಕೌಶಲ ಮತ್ತು
ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ
ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ
ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ
ಪೆಟ್ರೋಕೆಮಿಕಲ್ಸ್, ಪಾಲಿಮರ್ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ
ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಜು.25 ಕೊನೆಯ ದಿನವಾಗಿದ್ದು, ಡಿಪ್ಲೊಮಾ ಇನ್ ಪ್ಲಾಸ್ಟಿಕ್
ಟೆಕ್ನಾಲಜಿ (ಡಿಪಿಟಿ) 3 ವರ್ಷ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ (ಡಿಪಿಎಎಂಟಿ) 3
ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್
ಪ್ರೋಸೆಸ್ಸಿಂಗ್ ಅಂಡ್ ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ
ಸಲ್ಲಿಸಬಹುದು.
ಎಸ್.ಎಸ್.ಎಲ್.ಸಿ, ಪಿಯುಸಿ(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ
ತೇರ್ಗಡೆಯಾದವರು ಮತ್ತು ಹಾಜರಾದವರು ಅರ್ಜಿ ಸಲ್ಲಿಸಬಹುದು.
ಜು.27 ರಂದು ಕಂಪ್ಯೂಟರ್ ಬೇಸ್ಡ್ ಪ್ರವೇಶ ಪರೀಕ್ಷೆ
ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಿತಿತಿ.ಛಿiಠಿeಣ.gov.iಟಿ ಅಥವಾ ದೂರವಾಣಿ ಸಂಖ್ಯೆ: 0821-
2510618 ಅಥವಾ 9480253024, 9141075968, 9466146001 ಕ್ಕೆ
ಸಂಪರ್ಕಿಸಬಹುದೆಂದು ಸಿಪಿಟ್ ಸಂಸ್ಥೆಯ ನಿರ್ದೇಶಕರು ಮತ್ತು
ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿಯವರು ತಿಳಿಸಿದ್ದಾರೆ.