ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಪೂರ್ವಭಾವಿ ಸಭೆ.
ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷರಾದ ಶ್ರೀ ಎಂ ಡಿ ಲಕ್ಷ್ಮಿ ನಾರಾಯಣ್, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ, ಹಾಗೂ ಕ್ಷೇತ್ರ ವ್ಯಾಪ್ತಿ ಹಿಂ.ವ.ವಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಎಸ್ ಹೊಸಗೌಡರ ,ಮತ್ತು ಬಾಗಲಕೋಟ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಶ್ರೀ ಕಾಶಿನಾಥ್ ಹುಡೇದ ಅವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹಿಂ.ವ.ವಿ ರಾಜ್ಯ ಕಾರ್ಯದರ್ಶಿಗಳಾದ ಹಿಂ ವ ವಿ ಶ್ರೀ ಅಮರೇಶ ಮಡ್ಡಿಕಟ್ಟಿ ಅವರು, ರಾಜ್ಯ ಕಾರ್ಯದರ್ಶಿಗಳು ಶ್ರೀ ಹರಿಷ ಬಿ ಎಲ್ ಅವರು, ಶ್ರೀ ಶಾಂತು ಕೋಟನಕರ್ ಅವರು, ಶ್ರೀ ಆರ್ ಜಿ ರಾಮದುರ್ಗ ಅವರು, ಶ್ರೀ ಶ್ರೀನಿವಾಸ ಬಳ್ಳಾರಿ ಅವರು ಹಾಗೂ ಬಾಗಲಕೋಟೆ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.