ರವರೆಗೆ ಅವಧಿ ವಿಸ್ತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ
ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ
ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ
ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಯೋಜನೆ. ನರ್ಸಿಂಗ್ ವಿದ್ಯಾರ್ಥಿಗಳಿಗೆ
ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿ ಪ್ರಕ್ರಿಯೆ
ಪೂರ್ಣಗೊಳಿಸುವ ಅವಧಿಯನ್ನು ಜು. 25 ರವರೆಗೆ ವಿಸ್ತರಿಸಿದೆ.
ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ
ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ
ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್
ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿ,
ಅರ್ಜಿ ಸಲ್ಲಿಸಲು ಜೂ.20 ಅಂತಿಮ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ
ಕೋವಿಡ್-19 ಸೊಂಕಿನ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್
ಘೋಷಣೆಯಾದ ಕಾರಣ ಶಾಲಾ ಕಾಲೇಜುಗಳಿಗೆ ರಜೆಯನ್ನು
ಘೋಷಿಸಿದ್ದರಿಂದ, ವಿದ್ಯಾರ್ಥಿಗಳು ಇ-ದೃಢೀಕರಣ ಮಾಡಿಸುವುದು
ಕಷ್ಟಸಾಧ್ಯವಾಗಿತ್ತು. ಹೀಗಾಗಿ ಈಗಾಗಲೇ ಎಸ್‍ಎಸ್‍ಪಿ ಪೋರ್ಟಲ್ ನಲ್ಲಿ ಅರ್ಜಿ
ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿದ್ದು ಅರ್ಜಿಯನ್ನು
ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ (ಹೊಸದಾಗಿ ಅರ್ಜಿ
ಸಲ್ಲಿಸಲು ಅವಕಾಶವಿರುವುದಿಲ್ಲ.) ಅರ್ಜಿ ಅವಧಿಯನ್ನು ಜು.25 ರವರೆಗೆ
ವಿಸ್ತರಿಸಲಾಗಿದೆ.
ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ. ಕಾರ್ಯಕ್ರಮಗಳ ವಿವರ, ಅರ್ಹತೆ
ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ
ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್
ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಇಲಾಖಾ
ಸಹಾಯವಾಣಿ bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ
ದೂ.ಸಂ: 080-35254757, 8050770005/8050770004 ಕ್ಕೆ ಸಂಪರ್ಕಿಸಬಹುದೆಂದು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.