ಬೃಹತ್ ನೀರಾವರಿ ಇಲಾಖೆ(ಕರ್ನಾಟಕ ನೀರಾವರಿ ನಿಗಮ ನಿಯಮಿತ), ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಮೂಲಭೂತ ಸೌಲಭ್ಯ ಅಭಿವೃದ್ದಿ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಜು.24 ರ ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿರುವ ವರ್ಚುವಲ್ ಹೋಸ್ಟಿಂಗ್ ಕಾರ್ಯಕ್ರಮದ ಮೂಲಕ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು.
ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇವರ ಗೌರವ ಉಪಸ್ಥತಿ ಇರಲಿದ್ದು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ಕಂದಾಯ ಸಚಿವರಾದ ಆರ್.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀರಾಮುಲು, ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ, ಮೂಲಭೂತ ಸೌಲಭ್ಯ ಅಭಿವೃದ್ದಿ ಇಲಾಖೆ ಸಚಿವರಾದ ಆನಂದ್ ಸಿಂಗ್, ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ, ಕೃಷಿ ಸಚಿವರಾದ ಬಿ.ಸಿ.ಪಾಟಿಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಕೆ.ಸುಧಾಕರ್, ನಗರಾಭಿವೃದ್ದಿ ಸಚಿವರಾದ ಬಿ.ಎ.ಬಸವರಾಜ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಂಸದರು ಹಾಗೂ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ವಿವಿಧ ನಿಗಮ, ಮಂಡಳಿಗಳ, ಪ್ರಾಧಿಕಾರಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ರಾಜ್ಯ ಸರ್ಕಾರಿ ನೌಕಕರ ಸಂಘದ ಅಧ್ಯಕ್ಷರು, ವಿವಿಧ ಇಲಾಖೆಗಳ ಸರ್ಕಾರದ ಮುಖ್ಯ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಸರ್ಕಾರದ ಕಾರ್ಯದರ್ಶಿಗಳು ವಿವಿಧ ಇಲಾಖೆಗಳ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು, ಅಧಿಕಾರಿಗಳು ಪಾಲ್ಗೊಳ್ಳುವರು.
ಕಾರ್ಯಕ್ರಮದ ಮೈನ್ ಹೋಸ್ಟಿಂಗ್ ಮುಖ್ಯಮಂತ್ರಿಗಳ ಗೃಹ ಕಚೇರಿ, ಕೃಷ್ಣ ಇಲ್ಲಿ ನಡೆಯಲಿದ್ದು, ಕುವೆಂಪು ರಂಗಮಂದಿರ ಶಿವಮೊಗ್ಗ, ಗಾಂಧಿಮೈದಾನ ನಗರಸಭೆ ಸಾಗರ, ಇರುವಕ್ಕಿ ಗ್ರಾಮ ಸಾಗರ, ಸಾಂಸ್ಕøತಿಕ ಭವನ ಶಿಕಾರಿಪುರ, ಶ್ರೀ ಶಾಂತವೇರಿ ಗೌಪಾಲಗೌಡ ರಂಗಮಂದಿರ ತೀರ್ಥಹಳ್ಳಿ, ಶ್ರೀ ರೇಣುಕಾ ಸಭಾಭವನ, ಶಿರಾಳಕೊಪ್ಪ, ನೂತನ ಮೆಸ್ಕಾಂ ವಿಭಾಗೀಯ ಕಚೇರಿ ಕಟ್ಟಡ ಸಭಾಂಗಣ ಭದ್ರಾವತಿ ಇಲ್ಲಿ ಪ್ರಸಾರಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *