ತುಮಕೂರಿನಲ್ಲಿ ಇಂದು ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಭಾಗ ಮಟ್ಟದ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ, ಸಲೀಂ ಅಹಮದ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉಪಸ್ಥಿತರಿದ್ದರು.
ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಯಾವಾಗ ಮಾಡಬೇಕು ಎಂದು ನಿರ್ಧರಿಸುವುದು ಚುನಾವಣಾ ಆಯೋಗವೇ ಹೊರತು ರಾಜ್ಯ ಸರ್ಕಾರವಲ್ಲ. ಮೀಸಲಾತಿ ಪಟ್ಟಿ ಸಿದ್ಧಪಡಿಸಿದ ನಂತರ ದಿನಾಂಕ ಘೋಷಣೆ ಮಾಡಲಾಗುತ್ತದೆ. ಹಾಗಾಗಿ ಡಿಸೆಂಬರ್ ಒಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.
ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರಗಳು ಹಾಗೂ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮಗಳು, ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹ ಹೀಗೆ ಮುಂತಾದ ಉದ್ದೇಶಗಳೊಂದಿಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯಿತು.