ದಿನಾಂಕ:26.07.2021ರ ಸೋಮವಾರದಂದು ಗದುಗಿನ ಹುಯಿಲಗೋಳ ನಾರಾಯಣ ವೃತ್ತದಲ್ಲಿ (ಟಾಂಗಾ ಕೂಟ) ಮುಂಜಾನೆ 11.00 ಗಂಟೆಗೆ ರಾಜ್ಯದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಅಪೌಷ್ಟಿಕತೆ ಕಾಡುತ್ತಿದೆ. ಸಮತೋಲನ ಕಾಪಾಡಲು ಶ್ರಮಿಸಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಜೊತೆ ಸೇರಿ ಮೊಟ್ಟೆ ಟೆಂಡರ್ ನಲ್ಲಿ ಅಕ್ರಮ ಎಸಗಿದ್ದು ಅಕ್ಷಮ್ಯ ಅಪರಾಧ. ಈ ಅಕ್ರಮದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ.ಶಶಿಕಲಾ ಜೊಲ್ಲೆ ಇವರು ರಾಜೀನಾಮೆ ಒತ್ತಾಯಿಸಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಹಾಗೂ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಬೊಳನವರ ಇವರುಗಳು ಪತ್ರಿಕಾ ಪ್ರಕಟಣೆಯ ಮುಖಾಂತರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *