ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಭ್ರಷ್ಟ ಮಂತ್ರಿ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಗರ್ಭೀಣಿಯರು, ಬಾಣಂತಿಯರು ಮತ್ತು ಅಪೌಷ್ಠಿಕತೆಯ ಮಕ್ಕಳಿಗೆ ನೀಡುವ ಮೊಟ್ಟೆ ಖರೀದಿಯಲ್ಲಿ ಅಕ್ರಮ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮತ್ತು ಶಾಸಕ ಪರಪ್ಪ ಮುನೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ದಿನಾಂಕ: 27-07-2021ರ ಮಂಗಳವಾರ ಬೆಳಿಗ್ಗೆ 11-00 ಗಂಟೆಗೆ ದಾವಣಗೆರೆ ನಗರದಲ್ಲಿರುವ ಚಿಂದೋಡಿ ಲೀಲಾ ಕಲ್ಯಾಣಮಂಟಪದ ಬಳಿಯ ಜಿಲ್ಲಾ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮುಂಭಾಗದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಸಲಾಗುವುದು.
ಆದ ಕಾರಣ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು, ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳಾದ ಎನ್‍ಎಸ್‍ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಿಸಾನ್ ಕಾಂಗ್ರೆಸ್, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ. ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ರಾಜೇಶ್ವರಿ ಮತ್ತು ಶುಭಮಂಗಳ ತಿಳಿಸಿದ್ದಾರೆ.

Leave a Reply

Your email address will not be published. Required fields are marked *