ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಆಚರಿಸಲಾಯಿತು.
ಈಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ಇಂದು ವಿಶೇಷವಾಗಿ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಮಾತನಾಡಿ ದೇಶದ ಗಡಿಯಲ್ಲಿ ದೇಶದ ಎಲ್ಲಾ ವರ್ಗಗಳನ್ನು ರಕ್ಷಿಸುತ್ತಿರುವ ಸೈನಿಕರ ಪ್ರಾಣ ತ್ಯಾಗದಿಂದ ನಾವು ಇಂದು ಜೀವಿಸುತ್ತಿದ್ದೇವೆ. ಆದರೆ ಕೆಲವರು ಸೈನಿಕರ ಪ್ರಾಣ ಬಲಿದಾನವನ್ನೇ ಬಂಡವಾಳವಾಗಿಸಿಕೊಂಡು ರಾಜಕೀಯ ಮಾಡುವ ಮೂಲಕ ಸೈನಿಕರ ತ್ಯಾಗವನ್ನು ಅಪಮಾನ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಯುವ ಘಟಕದ ಮೈನುದ್ದೀನ್, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ರಂಗನಾಥ್ ಅವರುಗಳು ಮಾತನಾಡಿ ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜೊತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಮಹಿಳಾ ಕಾಂಗ್ರೆಸ್‍ನ ಶ್ರೀಮತಿ ಕವಿತಾ ಚಂದ್ರಶೇಖರ್, ಶ್ರೀಮತಿ ಗೀತಾ ಚಂದ್ರಶೇಖರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶುಭಮಂಗಳ, ಶ್ರೀಮತಿ ಶಿಲ್ಪಾ, ಶ್ರೀಮತಿ ಮಂಜುಳಾ, ಕಿಸಾನ್ ಕಾಂಗ್ರೆಸ್‍ನ ಸುರೇಶ್ ಜಾಧವ್, ಜಿಕ್ರಿಯಾ, ಸಾಮಾಜಿಕ ಜಾಲತಾಣದ ಗೋವಿಂದ್ ಹಾಲೇಕಲ್ಲು, ಯುವ ಕಾಂಗ್ರೆಸ್‍ನ ಸಾಗರ್ ಎಲ್‍ಎಂಹೆಚ್., ರಾಕೇಶ್, ಮುಖಂಡರುಗಳಾದ ಶ್ರೀಕಾಂತ್ ಬಗರೆ, ಅಭಿ ಬೇತೂರು, ಆರೋಗ್ಯ ಸ್ವಾಮಿ, ಯುವರಾಜ್ ಮತ್ತಿತರರಿದ್ದರು.