ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮವು
ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು
ಅನುಷ್ಟಾನಗೊಳಿಸಲು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ
ಹಾಗೂ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ
ಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮ ಸಮುದಾಯದÀ ಅರ್ಹ
ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ನೇರಸಾಲ ಯೋಜನೆ,
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ ಮೈಕ್ರೋ ಕ್ರೆಡಿಟ್
ಯೋಜನೆ, ಭೂ ಒಡೆತನ ಯೋಜನೆ, ಸಮಗ್ರ ಗಂಗಾಕಲ್ಯಾಣ
ಯೋಜನೆಗಳಿಗೆ ಜು.30 ರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಸಲ್ಲಿಸುವ ಅರ್ಜಿಗಳಲ್ಲಿ 1
ಎಕರೆ 20 ಗುಂಟೆಗಿಂತ ಕಡಿಮೆ ಜಮೀನು ಇರುವವರ, ಈ ಕಛೇರಿಯಿಂದ
ಈಗಾಗಲೇ ಸಾಲ ಸೌಲಭ್ಯ ಪಡೆದವರಿಗೆ ಮತ್ತು ಅರ್ಜಿದಾರರ ವಯಸ್ಸು 60
ವರ್ಷ ದಾಟಿದ್ದಲ್ಲಿ ಅಂತಹವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅರ್ಜಿ ಸಲ್ಲಿಸಲು ಆ.25 ಕೊನೆಯ ದಿನವಾಗಿದ್ದು, ಅರ್ಜಿಯನ್ನು ನಿಗಮದ
ವೆಬ್‍ಸೈಟ್ hಣಣಠಿs://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಡೌನ್‍ಲೋಡ್
ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ
ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು
ಅಥವಾ ದೂರವಾಣಿ ಸಂಖ್ಯೆ:08192-233309 ಕ್ಕೆ ಸಂಪರ್ಕಿಸಬಹುದು ಎಂದು
ಪ್ರಕಟಣೆ ತಿಳಿಸಿದೆ.