ನವದೆಹಲಿ, ಜು.31: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ನಾಳೆ ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದ ಗಡಿ ರಾಜ್ಯಗಳಿಂದ ಕನಾ೯ಟಕಕ್ಕೆ ಆಗಮಿಸುವವರು ಕೋವಿಡ್ ನೆಗೆಟೀವ್ ವರದಿ ಕಡ್ಡಾಯವಾಗಿ ತರಬೇಕೆಂದು ಸೂಚಿಸಲಾಗಿದೆ. ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಳದಿಂದಾಗಿ ಕೇರಳ – ಕನಾ೯ಟಕದ ಗಡಿಭಾಗದಲ್ಲಿ ಮತ್ತಷ್ಟು ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ನಾಳೆ ಕೊಡಗು ಸೇರಿದಂತೆ ಮೈಸೂರು, ಚಾಮರಾಜನಗರ, ಉಡುಪಿ ಜಿಲ್ಲೆಗಳ ಡಿಸಿ ಜತೆ ಮಾತನಾಡಿ ಲಸಿಕೆ ಪ್ರಮಾಣ, ಕೋವಿಡ್ ಹೆಚ್ಚಳಕ್ಕೆ ಕಾರಣವಾಗುತ್ತಿರುವ ಅಂಶಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ತೀಮಾ೯ನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.