ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಮಿಕ ಇಲಾಖೆಯ ಸಹಾಯೋಗದೊಂದಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 32ನೇ ವಾರ್ಡಿನಲ್ಲಿ ಹಿಂದುಳಿದ ವರ್ಗಗಳ ಅಸಂಘಟಿತ ಕಾರ್ಮಿಕರುಗಳಿಗೆ ಆಹಾರದ ಕಿಟ್ಟುಗಳನ್ನು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಲೋಕಿಕೆರೆ ನಾಗರಾಜ್ ಅವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ:- ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಲೋಕಿಕೆರೆ ನಾಗರಾಜ್ ,ಓಬಿಸಿ ಅಧ್ಯಕ್ಷರಾದ ಅಡಾಣಿ ಸಿದ್ದಪ್ಪ , ಓಬಿಸಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಎಸ್. ಪಿ, ಉಪಾಧ್ಯಕ್ಷರಾದ ಉಮೇಶ್ ಪಟೇಲ್, ರಾಜ್ಯ ನಿರ್ದೇಶಕರಾದ ಅ.ಬ ಮಜೀದ್ ಖಾನ್, ಕೃಷ್ಣಪ್ಪ , ಇನ್ನೂ ಮುಂತಾದವರು ಸಹ ಭಾಗಿಯಾಗಿದ್ದರು.