ಸೂಚನೆ

ಇದೇ ಆ.15 ರಂದು ಆಚರಿಸಲಾಗುವ ಸ್ವಾತಂತ್ರ್ಯೋತ್ಸವ
ದಿನಾಚರಣೆಯನ್ನು ಪರಿಸರ ಸಂರಕ್ಷಣೆ ಹಾಗೂ ಪರಿಸರ
ಸ್ನೇಹಿಯಾಗಿ ಆಚರಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ
ಮಂಡಳಿ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್
ಧ್ವಜ ಬಳಕೆ ಮತ್ತು ಮಾರಾಟ ಮಾಡುವುದನ್ನು
ನಿರ್ಬಂಧಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜ
ಉಪಯೋಗಿಸದಂತೆ ರಾಜ್ಯ ಪರಿಸರ ಮಾಲಿನ್ಯ ಮಂಡಳಿ ಮನವಿ
ಮಾಡಿಕೊಂಡಿದ್ದು, ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ
ಅಂಗಡಿ ಮಾಲೀಕರುಗಳ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ-2016
ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ, 1986 ರಡಿ ಕಾನೂನು

ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಯಾವುದೇ
ಕಾರಣಕ್ಕೂ ಸ್ವಾತಂತ್ರ್ಯೋತ್ಸವ ದಿನಾಚರಣೆಯ
ಪ್ರಯುಕ್ತ ಪ್ಲಾಸ್ಟಿಕ್ ಧ್ವಜಗಳ ಬಳಕೆ ಮತ್ತು ಮಾರಾಟ
ಮಾಡುವಂತಿಲ್ಲ ಎಂದು ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *