ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕಾಗಿ
ಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ
ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ

ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5
ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆ ಯನ್ವಯ
ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ತಕ್ಷಣದಿಂದ ಜಾರಿಗೆ
ಬರುವಂತೆ ರಾತ್ರಿ ಕಫ್ರ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
2021 ರ ಜುಲೈ 3 ಹಾಗೂ 18 ರಂದು ರಾಜ್ಯ ಸರ್ಕಾರವು
ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪ್ರತಿದಿನ ರಾತ್ರಿ 09
ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ
ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಅನುಮತಿಸಿದ
ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಆದೇಶವು
ಆ. 16 ರವರೆಗೆ ಅನ್ವಯವಾಗಲಿದೆ.
      ಸರ್ಕಾರದ ಜುಲೈ 31 ರ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ
ಎಲ್ಲಾ ಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು
ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ವಿಶೇಷ ಕಣ್ಗಾವಲು
ಕ್ರಮಗಳಿಗೆ ಸಂಬಂಧಿಸಿದಂತೆ ಆದೇಶಗಳು ಮುಂದಿನ
ಆದೇಶದವರೆಗೆ ಜಾರಿಯಲ್ಲಿರುತ್ತದೆ.
ದೇವಾಲಯ ಪ್ರವೇಶಕ್ಕೆ ನಿರ್ಬಂಧ : ಕೋವಿಡ್-19 ಸಂಭಾವ್ಯ
ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದ
ಜಾರಿಗೆ ಬರುವಂತೆ ಆ.31 ರವರೆಗೆ ಅಥವಾ ಮುಂದಿನ
ಆದೇಶದವರೆಗೆ ಜಿಲ್ಲೆಯ ಎಲ್ಲಾ ಮುಂಜರಾಯಿ
ದೇವಲಾಯಗಳು ಮತ್ತು ಖಾಸಗಿ ದೇವಲಾಯಗಳಲ್ಲಿ
ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದ್ದು,
ಶನಿವಾರ ಮತ್ತು ಭಾನುವಾರಗಳಂದು ಭಕ್ತಾಧಿಗಳ
ದೇಗುಲ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೆ ಎಲ್ಲ ಸಾಮಾಜಿಕ, ಸಾಂಸ್ಕøತಿಕ,
ಧಾರ್ಮಿಕ ಕಾರ್ಯಕ್ರಮಗಳು ಮತ್ತು ಇತರೆ
ಜನದಟ್ಟಣೆಯಿಂದ ಕೂಡಿದ ಕಾರ್ಯಕ್ರಮಗಳು ಅಲ್ಲದೆ
ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಮುಂಬರುವ ಹಬ್ಬದ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲ
ದೇವಾಲಯಗಳಲ್ಲಿ ಜನದಟ್ಟಣೆಯನ್ನು ನಿಯಂತ್ರಿಸುವುದು
ಅನಿವಾರ್ಯವಾಗಿದೆ.    ದೇವಸ್ಥಾನಗಳಿಗೆ ತೆರಳುವವರು
ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್
ನಿಯಂತ್ರಣ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಭಕ್ತಾಧಿಗಳಿಗೆ ದೇವಾಲಯದ ಪ್ರವೇಶ ಹಾಗೂ ದೇವರ
ದರ್ಶನಕ್ಕೆ ಮಾತ್ರ ಅವಕಾಶ ನೀಡಿದ್ದು, ಜಾತ್ರೆ, ಮೆರವಣಿಗೆ,
ದೇವಾಲಯಗಳಲ್ಲಿ ಉತ್ಸವ, ಸೇವೆ, ಮಡಿ, ಪ್ರಸಾದ, ದಾಸೋಹ
ಇತ್ಯಾದಿಗಳನ್ನು ನಿಷೇಧಿಸಿದೆ. ಶನಿವಾರ ಮತ್ತು
ಭಾನುವಾರಗಳಂದು ಅರ್ಚಕರುಗಳಿಂದ ಸಾಂಪ್ರಾದಾಯಿಕ
ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿ, ಭಕ್ತಾದಿಗಳ
ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಆದೇಶ ಆ.31
ರವರೆಗೆ ಜಾರಿಯಲ್ಲಿರುತ್ತದೆ.
ಸರ್ಕಾರದ ಮಾರ್ಗಸೂಚಿಗಳನ್ನು ಯಾವುದೇ ವ್ಯಕ್ತಿ
ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ
ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ
ಕಾಯ್ದೆಗಳನ್ವಯ ಕಾನೂನು ಕ್ರಮ
ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ
ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *