ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಎನ್‍ಎಸ್‍ಯುಐ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಹಾನ್ ನಾಯಕರುಗಳ ಕುರಿತು ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇ ಸ್ಪರ್ಧೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ದಿನೇಶ್ ಶೆಟ್ಟಿ ಅವರು ಇಂದು ದೇಶದಲ್ಲಿ ಸ್ವಾತಂತ್ರ್ಯಕ್ಕೆ ತ್ಯಾಗ ಬಲಿದಾನ ಮಾಡಿದವರನ್ನು ಮರೆಸಿ ಬ್ರಿಟಿಷ್ ಪರವಾಗಿದ್ದವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಲಾಗುತ್ತಿದೆ ಎಂದು ದೂರಿದರು.

ಇಂದಿನ ಯುವ ಪೀಳಿಗೆಗೆ ನಮ್ಮ ಇತಿಹಾಸ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ಮೂಲಕ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟಗಾರರನ್ನು ದಾರ್ಶನಿಕರನ್ನು ನೆನಪು ಮಾಡಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಹರೀಶ್ ಕೆ.ಎಲ್.ಬಸಾಪುರ, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಅಲಿ ರೆಹಮತ್, ತೀರ್ಪುಗಾರರಾಗಿದ್ದ ಶ್ರೀಮತಿ ಸುಷ್ಮಾ ಪಾಟೀಲ್, ಯತಿರಾಜ್ ಮಠದ್ ಮಾತನಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಸಂದೀಪ್ ಅಣಬೇರು, ಶಶಿಧರ ಪಾಟೀಲ್, ಮನು, ಬಸವರಾಜ್, ಯುವರಾಜ್ ಮತ್ತಿತರರಿದ್ದರು

Leave a Reply

Your email address will not be published. Required fields are marked *