ಕರ್ನಾಟಕ ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಶುಭ ಹಾರೈಸಿದರು.

ದೇಶದಲ್ಲಿಯೇ ಕೋವಿಡ್ ಪ್ರಕರಣಗಳು ಜಾಸ್ತಿ ಇರುವ ಕೇರಳ ರಾಜ್ಯದ ಗಡಿ ಪ್ರದೇಶವು ನನ್ನ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು ಕೋವಿಡ್ ಹೆಚ್ಚಾಗುವ ಭೀತಿಯಿದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆ ನೀಡಬೇಕೆಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು.

ಅದೇ ರೀತಿ ಈಗಾಗಲೇ ಎರಡು ಮೂರು ಸುತ್ತಿನ ಸಭೆ ನಡೆಸಿದರೂ ಕಡಲ್ಕೊರೆತಕ್ಕೆ ಸಂಭಂಧಿಸಿದಂತೆ ಮನೆಗಳು ಹಾನಿಯಾಗುವುದು ತಪ್ಪುತ್ತಿಲ್ಲ ಎಂದು ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಹೆಚ್ಚಿನ ಲಸಿಕೆ ಪೂರೈಸುವುದಾಗಿಯೂ ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶೀಘ್ರ ಸಭೆ ನಡೆಸುವುದಾಗಿ ಶಾಸಕ ಯು.ಟಿ.ಖಾದರ್ ರವರಿಗೆ ಭರವಸೆ ನೀಡಿದರು.

Leave a Reply

Your email address will not be published. Required fields are marked *