ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಸುಧಾಕರ್, ಜಿಲ್ಲೆಯ ಶಾಸಕರುಗಳು, ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟಿಂಬ ಕಲ್ಯಾಣ ಇಲಾಖೆಯ ಆಯುಕ್ತರು, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.