ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ಅಂದರೆ ಆಗಸ್ಟ್ 15ರ ಭಾನುವಾರದಂದು 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸಲಾಗಿದೆ.

ನಾಳೆ ಬೆಳಿಗ್ಗೆ 7-30 ಗಂಟೆಗೆ ದಾವಣಗೆರೆಯ ಡಾ|| ಎಂ.ಸಿ.ಮೋದಿ ವೃತ್ತ (ಗುಂಡಿ ಸರ್ಕಲ್)ನಿಂದ ನಗರದ ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ತೆರಳಲಾಗುವುದು ನಂತರ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರು ಧ್ವಜಾರೋಹಣ ನಡೆಸುವರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿರವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮಹಾನಗರ ಪಾಲಿಕೆಯ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾಗೂ ಸಭೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಕೋರಿದ್ದಾರೆ.

Leave a Reply

Your email address will not be published. Required fields are marked *