ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶ- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ – ಕೆ ರಂಗನಾಥ್
ಸ್ವತಂತ್ರ ಸೇನಾನಿ, ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಹಾಗೂ ಜನವರಿ 26ರಂದು ಗಣರಾಜ್ಯೋತ್ಸವದಂದು ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮಗಳಾಗಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಆಚರಿಸಬೇಕೆಂದು ಇಂದು ಸಚಿವ ಸಂಪುಟದ ಮಹತ್ವ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನವರು ಆದೇಶಿಸಿದ್ದು ಇದು ರಾಯಣ್ಣನ ಅಭಿಮಾನಿಗಳಲ್ಲಿ ಅತ್ಯಂತ ಸಂತೋಷ ತಂದಿದೆ ಆದೇಶ ಮಾಡಿದ ಸರ್ಕಾರದ ಮುಖ್ಯಮಂತ್ರಿಗಳಿಗೂ ಹಾಗೂ ಎಲ್ಲಾ ಸಚಿವರಿಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ ರಂಗನಾಥ್ ಅವರು ಅಭಿನಂದಿಸಿದ್ದಾರೆ.