ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲಿಕೆ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡಿಸುವುದರ ಬಗ್ಗೆ ಚರ್ಚಿಸಲಾಯಿತು.
ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ನಾಸೀರ ಹುಷೇನ್ ಸಾಬ್, ವಿಧಾನಪರಿಷತ್ ಸದಸ್ಯ ಹರಿಪ್ರಸಾದ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಶಾಸಕ ಪೀರೋಜ್ ಸೇಠ್, ವೀರಕುಮಾರ್ ಪಾಟೀಲ, ಎಸ್.ಬಿ.ಗಾಟಗೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸಭೆಯಲ್ಲಿ ಇದ್ದರು.