ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03
ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ.
ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ
ಕೋರ್ಸ್ ಕಲಿಕೆಗಾಗಿ ಕರ್ನಾಟಕದ ಗದಗ-ಬೆಟಗೇರಿಯಲ್ಲಿರುವ
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿಂದ 22
ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ನಲ್ಲಿರುವ
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿಂದ 17,
ಆಂಧ್ರಪ್ರದೇಶದ ವೆಂಕಟಗಿರಿಯಲ್ಲಿರುವ ಎಸ್.ಪಿ.ಕೆ.ಎಂ.
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿಂದ 03,
ಕೇರಳದ ಕಣ್ಣೂರಿನಲ್ಲಿರುವ ಭಾರತೀಯ ಕೈಮಗ್ಗ
ತಂತ್ರಜ್ಞಾನ ಸಂಸ್ಥೆಯಿಂದ 02 ಸೇರಿದಂತೆ ಒಟ್ಟು 44 ಪುರುಷ
ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಸಕ್ತರಿಂದ
ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ
ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021ರ ಜೂ.01ಕ್ಕೆ
ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23
ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ಅಭ್ಯರ್ಥಿಗಳು 15 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ
ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.1000 ರಿಂದ 1200 ರವರೆಗೆ
ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ
ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ
ಕಲ್ಪಿಸಲಾಗುವುದು.
       ಅರ್ಜಿ ಸಲ್ಲಿಸಲು  ಆ.23 ಕೊನೆಯ ದಿನವಾಗಿದ್ದು, ಮೆರಿಟ್
ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ
ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ
ಕರೆಯಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು
ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ  ಗದಗ ಜಿಲ್ಲೆಯ

ನರಸಾಪೂರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ
ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿಗಳಿಗಾಗಿ ಕೈಮಗ್ಗ
ಮತ್ತು ಜವಳಿ ಇಲಾಖೆ ಕಚೇರಿಯನ್ನು ಅಥವಾ ದೂರವಾಣಿ
ಸಂಖ್ಯೆ 08192-262362 ಯನ್ನು ಸಂಪರ್ಕಿಸಬಹುದು
ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *