ಇಂದು ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ಸರ್ ಅವರ ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶಿವನಗೌಡ ನಾಯಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ಗುರು ಹಿರಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *