ಆ.22 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ
ಪರೀಕ್ಷೆಯಲ್ಲಿ ಅವ್ಯವಹಾರ ತಡೆಗಟ್ಟಲು ನಗರದ 27 ಪರೀಕ್ಷಾ
ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ
ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ
ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪರೀಕ್ಷೆಗಳು ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾ
ಕೆಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ
ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್
ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ
ಮುಚ್ಚುವಂತೆ ಆದೇಶಿಸಲಾಗಿದೆ.
ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ
ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ
ಅನ್ವಯಿಸುವುದಿಲ್ಲ.
ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪರೀಕ್ಷಾ
ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು
ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಗಡಿಗಳು
ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಜಿಲ್ಲಾ ಪೊಲೀಸ್
ಅಧೀಕ್ಷಕರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಅವರು ಆದೇಶಿಸಿದ್ದಾರೆ.