ಇಂದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಿದರು, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಪಿ. ಪಾಲಣ್ಣ, ಬಳ್ಳಾರಿ ಶಾಸಕರಾದ ಶ್ರೀ ಸೋಮಶೇಖರ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಬಿಜೆಪಿ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.