ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ವಿಧಾನಸೌಧದ ಕಛೇರಿಯಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ, ಸಾರಿಗೆ ಇಲಾಖೆ ಆಯುಕ್ತರಾದ ಶ್ರೀ ಶಿವಕುಮಾರ್, ಕೆಎಸ್‌ಆರ್‌ಟಿಸಿ ಎಂಡಿ ಶ್ರೀ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಡಾ. ಎಂ.ಟಿ. ರೇಜು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂಡಿ ಶ್ರೀ ಕೂರ್ಮಾ ರಾವ್ , ಎನ್ ಡಬ್ಲ್ಯೂ ಕೆಆರ್ ಟಿ ಸಿ ಎಂಡಿ ಶ್ರೀ ಗುರುದತ್ ಹೆಗ್ಡೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.