ಕುರಿತು ಸಭೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ತೋಟಗಾರಿಕೆ
ಉತ್ಪನ್ನಗಳ ಮಾರಾಟ ಸಹಕಾರ ಸಂಘದ (ತುಮ್ ಕೋಸ್)
ವತಿಯಿಂದ ನಿರ್ಮಾಣವಾಗುತ್ತಿರುವ ಬಹು ಅಂತಸ್ತಿನ ಸೂಪರ್ ಮಾರ್ಕೆಟ್
ಕಟ್ಟಡದ ಕಾಮಗಾರಿಗೆ ಅನುಮತಿ ನೀಡುವ ಕುರಿತು ನಗರಾಭಿವೃದ್ಧಿ
ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಬಸವರಾಜ ಮತ್ತು
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ
ಎಂ.ಟಿ.ನಾಗರಾಜ ಅವರ ಜಂಟಿ ಅಧ್ಯಕ್ಷತೆಯಲ್ಲಿ ಆ.27 ರ ಬೆಳಿಗ್ಗೆ
ವಿಧಾನಸೌಧದಲ್ಲಿನ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು.
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆ.ಎಸ್.ಡಿ.ಎಲ್
ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ, ನಗರಾಭಿವೃದ್ಧಿ
ಇಲಾಖೆಯ ಕಾರ್ಯದರ್ಶಿ ಎಂ.ಎನ್.ಅಜಯ್ ನಾಗಭೂಷಣ್, ದಾವಣಗೆರೆ
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ನಗರ ಮತ್ತು ಗ್ರಾಮಾಂತರ
ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎಲ್.ಶಶಿಕುಮಾರ್
ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *